ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಡಾ.ಹೆಚ್.ಸಿ.ಮಹದೇವಪ್ಪ

ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಡಾ.ಹೆಚ್.ಸಿ.ಮಹದೇವಪ್ಪ
Spread the love

ಮೈಸೂರು,ಮಾ.3  ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕಟುಂಬ ಕಲ್ಯಾಣ ಇಲಾಖೆ ವತಿಯಿಂದ ನಗರದ ಎಸ್.ಎಂ.ಟಿ ಆಸ್ಪತ್ರೆಯಲ್ಲಿ ಭಾನುವಾರ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಪುಟ್ಟ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಸಚಿವರು, ಮಕ್ಕಳು ಅಂಗಾಂಗಳ ನ್ಯೂನ್ಯತೆಗೆ ಒಳಗಾಗಬಾರದು ಎಂಬ ಮುನ್ನಚ್ಚರಿಕೆ ಕ್ರಮವಾಗಿ ಸರ್ಕಾರವು ಪೋಲಿಯೊ ಲಸಿಕಾ ಅಭಿಯಾನ ಹಮ್ಮಿಕೊಂಡಿದ್ದು, ಎಲ್ಲಾ ಪೋಷಕರು ತಮ್ಮ ಐದು ವರ್ಷದೊಳಗಿನ ಮಕ್ಕಳಿಗೆ ನಿರ್ಲಕ್ಷ್ಯ ಮಾಡದೆ ಕಡ್ಡಾಯವಾಗಿ ಪೋಲಿಯೊ ಹಾಕಿಸಬೇಕು. ಸಮಾಜದಲ್ಲಿ ಎಲ್ಲ ಮಕ್ಕಳ ಆರೋಗ್ಯದಿಂದ ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ವಿಶೇಷ ಚೇತನ ಮಕ್ಕಳಿಗೆ ಗಾಲಿಕುರ್ಚಿ, ಎಂ.ಆರ್ ಕಿಟ್ ಸಾಮಾಗ್ರಿಗಳು ಹಾಗೂ
ಕಾರ್ಮಿಕ ಇಲಾಖೆಯ ವತಿಯಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಲ್ಯಾಪ್ ಟಾಪ್‌ಗಳನ್ನು ವಿತರಣೆ ಮಾಡಿದರು.

ಈ ವೇವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ, ಜಿಲ್ಲಾ ಆರೋಗ್ಯ ಮತ್ತು ಕಟುಂಬ ಕಲ್ಯಾಣ ಅಧಿಕಾರಿ ಡಾ.ಪಿ.ಸಿ.ಕುಮಾರಸ್ವಾಮಿ, ಎಂ.ಎಂ.ಸಿ. ಮತ್ತು ಆರ್‌ಐ ನಿರ್ದೇಶಕರಾದ ಡಾ.ದಾಕ್ಷಾಯಿಣಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಜಯಂತ್, ನೋಡೆಲ್ ಅಧಿಕಾರಿ ಡಾ.ವಸಂತ್, ಸಿಎಚ್ಒ ಡಾ.ವೆಂಕಟೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Comments

No comments yet. Why don’t you start the discussion?

Leave a Reply

Your email address will not be published. Required fields are marked *