ಮೈಸೂರು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್ ಅವರು ಸ್ಟ್ರಾಂಗ್ ರೂಮ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೈಸೂರು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್ ಅವರು ಸ್ಟ್ರಾಂಗ್ ರೂಮ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Spread the love

ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ, ವಿವಿ ಪ್ಯಾಟ್‌ಗಳನ್ನ ಸೀಲ್ ಮಾಡಿ ಸ್ಟ್ರಾಂಗ್ ರೂಂಗಳಿಗೆ ರವಾನೆ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್ ಅವರು ಸ್ಟ್ರಾಂಗ್ ರೂಮ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ
ಮಾತನಾಡಿದ ಜಿಲ್ಲಾಧಿಕಾರಿಗಳು ಮತಯಂತ್ರಗಳಿಗೆ ಮೂರು ಹಂತದ ಭದ್ರತೆನೀಡಲಾಗುತ್ತಿದ್ದು
ಇವಿಎಂ, ವಿವಿ ಪ್ಯಾಟ್ ಇರುವ ರೂಂ ಗಳಿಗೆ ಮೊದಲ ಹಂತದಲ್ಲಿ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ ತುಕಡಿ, 2ನೇ ಹಂತದಲ್ಲಿ ಕರ್ನಾಟಕ ಸಶಸ್ತ್ರ ಮೀಸಲು ಪಡೆ ಹಾಗೂ 3ನೇ ಹಂತದಲ್ಲಿ ಸ್ಥಳೀಯ ಸಿವಿಲ್ ಪೊಲೀಸ್ ಸಿಬ್ಬಂದಿ ಯನ್ನು ಬಂದೋಬಸ್ತ್ ಗಾಗಿ ನಿಯೋಜಿಸಲಾಗಿದೆ. ಕಟ್ಟಡದ ಎಲ್ಲಾ ಸ್ಟ್ರಾಂಗ್ ರೂಂಗಳು, ಮತ ಎಣಿಕಾ ಕೇಂದ್ರಗಳಿಗೆ ಹೆಚ್ಚು ಸಿಸಿ ಕ್ಯಾಮರಾಗಳನ್ನು ಅಳವಡಿಸಿ, ಕಟ್ಟೆಚ್ಚರ ವಹಿಸಲಾಗಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಎಂ.ಮುತ್ತು ರಾಜ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಮಹೇಶ್ ಹಾಗೂ ಇತರೆ ಚುನಾವಣಾ ಅಧಿಕಾರಿಗಳು ಉಪಸ್ಥಿತರಿದ್ದರು.

Comments

No comments yet. Why don’t you start the discussion?

Leave a Reply

Your email address will not be published. Required fields are marked *