SSLC Results : ಮೇ ಎರಡನೇ ವಾರದಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ ?

SSLC Results : ಮೇ ಎರಡನೇ ವಾರದಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ ?
Spread the love

ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆಯ ಫ‌ಲಿತಾಂಶವನ್ನು ಮೇ ಎರಡನೇ ವಾರದಲ್ಲಿ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ ನಿರ್ಧರಿಸಿದ್ದು, ಇನ್ನೂ ಫ‌ಲಿತಾಂಶದ ದಿನಾಂಕ ನಿಗದಿಯಾಗಿಲ್ಲ. ಮಾ. 25ರಿಂದ ಎ. 6ರ ವರೆಗೆ 2,750 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದವು.ಪರೀಕ್ಷೆ ಮುಗಿದ ಬೆನ್ನಲ್ಲೇ ಮೌಲ್ಯಮಾಪನ ಪ್ರಕ್ರಿಯೆ ನಡೆಸಲಾಗಿತ್ತು. ಎಲ್ಲ ಪತ್ರಿಕೆಗಳ ಮೌಲ್ಯಮಾಪನ ಪೂರ್ಣಗೊಂಡಿದ್ದು, ಅಂಕಗಳ ಕೂಡುವಿಕೆ ನಡೆಯುತ್ತಿದೆ. ಮೇ 7ರ ಒಳಗೆ ಎಲ್ಲ ಪ್ರಕ್ರಿಯೆಗಳೂ ಪೂರ್ಣಗೊಳ್ಳಲಿವೆ. ಮೇ 7ರಂದು ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಮತದಾನ ಇರುವುದರಿಂದ ಅನಂತರ ಫ‌ಲಿತಾಂಶ ಪ್ರಕಟಿಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ರಿಸಲ್ಟ್ ಎಲ್ಲಿ ನೋಡಬಹುದು?

 

ಕರ್ನಾಟಕದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಫಲಿತಾಂಶವನ್ನು ಕರ್ನಾಟಕ ಶಾಲೆ ಪರೀಕ್ಷೆ & ಮೌಲ್ಯ ನಿರ್ಣಯ ಮಂಡಳಿ ವೆಬ್‌ಸೈಟ್‌ನಲ್ಲಿ ನೋಡಬಹುದು. ಮೊದಲಿಗೆ ತಮ್ಮ ರಿಜಿಸ್ಟರ್ ನಂಬರ್/ ರೋಲ್‌ ನಂಬರ್ ಹೊಂದಿರಬೇಕು. ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ (ನೋಂದಣಿ ಸಂಖ್ಯೆ) ಮೂಲಕ ಕರ್ನಾಟಕ ಶಾಲೆ ಪರೀಕ್ಷೆ & ಮೌಲ್ಯ ನಿರ್ಣಯ ಮಂಡಳಿ ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದು. ಇದಕ್ಕೆ ನೀವು kseab.karnataka.gov.in ಗೆ ಭೇಟಿ ನೀಡಬಹುದು.

Comments

No comments yet. Why don’t you start the discussion?

Leave a Reply

Your email address will not be published. Required fields are marked *