T20 World Cup 2024 : ವಿರಾಟ್ ಕೊಹ್ಲಿ, ಟೀಮ್ ಇಂಡಿಯಾಗೆ ಎಚ್ಚರಿಕೆ ಕೊಟ್ಟ ಪಾಕ ನಾಯಕ ಬಾಬರ್ ಅಜಮ್

T20 World Cup 2024 : ವಿರಾಟ್ ಕೊಹ್ಲಿ, ಟೀಮ್ ಇಂಡಿಯಾಗೆ ಎಚ್ಚರಿಕೆ ಕೊಟ್ಟ ಪಾಕ ನಾಯಕ ಬಾಬರ್ ಅಜಮ್
Spread the love

ಬಹುನಿರೀಕ್ಷಿತ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ವೆಸ್ಟ್‌ ಇಂಡೀಸ್‌ ಮತ್ತು ಅಮೆರಿಕಾ ದೇಶಗಳಲ್ಲಿ ಜೂನ್ 1 ರಿಂದ ಆರಂಭವಾಗಲಿದೆ. ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಜೂನ್ 5 ರಿಂದ ಐರ್ಲೆಂಡ್ ವಿರುದ್ಧ ಟೀಮ್‌ ಇಂಡಿಯಾ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ.

ಇದರ ನಂತರ ವಿಶ್ವದಾದ್ಯಂತದ ಕ್ರಿಕೆಟ್ ಅಭಿಮಾನಿಗಳು ಎದರು ನೋಡುತ್ತಿರುವ ಹೈವೋಲ್ಟೇಜ್‌ ಪಂದ್ಯ ನಡೆಯಲಿದೆ. ಅಂದರೆ ಟೀಂ ಇಂಡಿಯಾ ಮತ್ತು ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ತಾನ ಜೂನ್ 9 ರಂದು ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಮುಖಾಮುಖಿಯಾಗುತ್ತಿವೆ.

 

ಈ ಪಂದ್ಯಕ್ಕೂ ಮುನ್ನ ಪಾಕ್ ನಾಯಕ ಬಾಬರ್ ಅಜಮ್ ವೈಯಕ್ತಿಕ ಸಂದರ್ಶನದಲ್ಲಿ ವಿರಾಟ್ ಕೊಹ್ಲಿ ಬಗ್ಗೆ ಮಾತನಾಡಿದ್ದಾರೆ. ಮೊದಲು ಬಾಬರ್ ಆಜಮ್ ವಿರಾಟ್ ಕೊಹ್ಲಿ ಮತ್ತು ಟೀಂ ಇಂಡಿಯಾವನ್ನು ಹೊಗಳಿದ್ದಾರೆ. ಬಳಿಕ ಬಾಬರ್ ಎಚ್ಚರಿಕೆಯನ್ನೂ ನೀಡಿದ್ದಾರೆ. ವಿರಾಟ್ ಕೊಹ್ಲಿ ವಿಶ್ವ ದರ್ಜೆಯ ಬ್ಯಾಟ್ಸ್‌ಮನ್ ಮತ್ತು ವಿಶ್ವದ ಅತ್ಯುತ್ತಮ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು. ಅವರ ಜೊತೆಗೆ, ನಾವು ಭಾರತದ ಇತರ 10 ಆಟಗಾರರ ವಿರುದ್ಧವೂ ವಿಶೇಷ ಯೋಜನೆಗಳನ್ನು ರೂಪಿಸಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

 

2024 ರ ಟಿ 20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ಮತ್ತು ಭಾರತವನ್ನು ಒಂದೇ ಗುಂಪಿನಲ್ಲಿ ಇರಿಸಲಾಗಿದೆ. ಜೂನ್ 9 ರಂದು ಈ ಎರಡು ತಂಡಗಳ ನಡುವೆ ಜಿದ್ದಾಜಿದ್ದಿನ ಪೈಪೋಟಿಯನ್ನು ಅಭಿಮಾನಿಗಳು ಕಣ್ತುಂಬಿಕೊಳ್ಳಲಿದ್ದಾರೆ. ಭಾರತ ಮತ್ತು ಪಾಕಿಸ್ತಾನಿ ಅಭಿಮಾನಿಗಳಲ್ಲದೆ, ವಿಶ್ವದಾದ್ಯಂತದ ಕ್ರಿಕೆಟ್ ಅಭಿಮಾನಿಗಳು ಸಹಾ ಉಭಯ ತಂಡಗಳ ಕ್ರಿಕೆಟ್‌ ಕದನಕ್ಕೆ ಕಾಯುತ್ತಿದ್ದಾರೆ.

ಟಿ20 ವಿಶ್ವಕಪ್‌ಗೆ IND vs PAK ತಂಡಗಳು :

ಭಾರತ ತಂಡ : ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿ.ಕೀ), ಸಂಜು ಸ್ಯಾಮ್ಸನ್ (ವಿ.ಕೀ), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶ್‌ದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.

ಪಾಕಿಸ್ತಾನ ತಂಡ : ಬಾಬರ್ ಆಜಮ್‌ (ನಾಯಕ) ಇಫ್ತಿಕರ್ ಅಹಮದ್, ಇಮಾದ್ ವಾಸಿಂ, ಸಲ್ಮಾನ್ ಅಲಿ ಅಘಾ, ಶದಾಬ್ ಖಾನ್, ಫಖರ್ ಜಮಾನ್, ಸೈಮ್ ಅಯೂಬ್, ಉಸ್ಮಾನ್ ಖಾನ್, ಅಬ್ರಾರ್ ಅಹಮದ್, ಹಾರಿಸ್ ರೌಫ್, ಹಸನ್ ಅಲಿ, ಅಬ್ಬಾಸ್ ಅಫ್ರಿದಿ, ಮೊಹಮ್ಮದ್ ಅಮೀರ್, ಇರ್ಫಾನ್ ಖಾನ್, ನಸೀಮ್ ಶಾ, ಶಾಹೀನ್ ಶಾ ಆಫ್ರಿದಿ, ಆಝಂ ಖಾನ್ (ವಿ.ಕೀ) ಮೊಹಮ್ಮದ್ ರಿಝ್ವಾನ್ (ವಿ.ಕೀ)

Comments

No comments yet. Why don’t you start the discussion?

Leave a Reply

Your email address will not be published. Required fields are marked *