ಇವಿಎಂ ಮತಯಂತ್ರಕ್ಕೆ ಬೆಂಕಿ ಹಚ್ಚಿದ ಮತದಾರ ! ಕಾರಣ ಕೇಳಿದರೆ ಬೆಚ್ಚಿ ಬೀಳುತ್ತೀರಾ

ಇವಿಎಂ ಮತಯಂತ್ರಕ್ಕೆ ಬೆಂಕಿ ಹಚ್ಚಿದ ಮತದಾರ ! ಕಾರಣ ಕೇಳಿದರೆ ಬೆಚ್ಚಿ ಬೀಳುತ್ತೀರಾ
Spread the love

ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಸಂಗೋಳ ತಾಲ್ಲೂಕಿನ ಬಾದಲವಾಡಿಯಲ್ಲಿ ಮತಯಂತ್ರವನ್ನು ಮತಗಟ್ಟೆಗೆ ತರುವುದು ತಡವಾಗಿದ್ದಕ್ಕೆ ಆಕ್ರೋಶಗೊಂಡ ಮತದಾರ ಪೆಟ್ರೋಲ್ ಸುರಿದು ಇವಿಎಂಗೆ ಬೆಂಕಿ ಹಚ್ಚಿರುವ ವಿಚಿತ್ರ ಘಟನೆ ನಡೆದಿದೆ.

ಬಿಆರ್‌ಎಸ್ ನಾಯಕಿ ಕೆ ಕವಿತಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ!

ಮಾದ ಲೋಕಸಭಾ ಕ್ಷೇತ್ರದ ಸಂಗೋಳ ತಾಲೂಕಿನ ಬಾಗಲವಾಡಿಯ ಮತಗಟ್ಟೆಯಲ್ಲಿ ಈ ಘಟನೆ ನಡೆದಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮತದಾರನೊಬ್ಬ ಇವಿಎಂ ಯಂತ್ರಕ್ಕೆ ಬೆಂಕಿ ಹಚ್ಚಲು ಯತ್ನಿಸಿದ್ದಾರೆ. ತಕ್ಷಣ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಸೊಲ್ಲಾಪುರ ಎಸ್ಪಿ ಶಿರೀಶ ದೇಶಪಾಂಡೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸಂಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆಯಿಂದಾಗಿ ಮತದಾನ ಪ್ರಕ್ರಿಯೆ ಕೆಲ ಸಮಯ ನಿಲ್ಲಿಸಲಾಗಿತ್ತು. ಹೊಸ ಇವಿಎಂ ಯಂತ್ರ ಬಂದ ನಂತರ ಮತದಾನ ಪ್ರಕ್ರಿಯೆ ಮುಂದುವರೆಯಿತು. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

 

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮತಗಟ್ಟೆಯ ಒಳಗೆ ಮತ್ತು ಹೊರಗೆ ಗದ್ದಲ ಉಂಟಾದಾಗ ವ್ಯಕ್ತಿಯೊಬ್ಬ ನೀರನ್ನು ಬಳಸಿ ಇವಿಎಂನಲ್ಲಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಈ ಘಟನೆಯಿಂದಾಗಿ ಹೊಸ ಯಂತ್ರ ತರುವವರೆಗೆ ಕೆಲಕಾಲ ಮತದಾನ ಸ್ಥಗಿತಗೊಳಿಸಬೇಕಾಯಿತು. ನಂತರ ಚುನಾವಣಾ ಮತಗಟ್ಟೆಯ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

 

ಸೊಲ್ಲಾಪುರದಲ್ಲಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ ಅವರ ಪುತ್ರಿ ಹಾಗೂ ಸೊಲ್ಲಾಪುರ ಸಿಟಿ ಸೆಂಟ್ರಲ್ ಕ್ಷೇತ್ರದಿಂದ ಮೂರು ಬಾರಿ ಶಾಸಕಿಯಾಗಿರುವ ಪ್ರಣಿತಿ ಶಿಂಧೆ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಸತ್ಪುಟೆ ಅವರು ಪಕ್ಕದ ಮಾಧಾ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಸೋಲಾಪುರ ಜಿಲ್ಲೆಯ ಮಲ್ಶಿರಾಸ್‌ನಿಂದ ಶಾಸಕರಾಗಿದ್ದಾರೆ.

 

Comments

No comments yet. Why don’t you start the discussion?

Leave a Reply

Your email address will not be published. Required fields are marked *