ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿ ಇದೆ. ಬಳ್ಳಾರಿ, ಕೊಡಗು, ಧಾರವಾಡ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಕೆಲಸ ಖಾಲಿ ಇದೆ. ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮುಂತಾದ ಮಾಹಿತಿ, ವಿವರ ಇಲ್ಲಿದೆ.
ಬಳ್ಳಾರಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ನವೆಂಬರ್ 7ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಗರದ ಹಳೆಯ ತಾಲ್ಲೂಕು ಕಚೇರಿ ಆವರಣದಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಆಯೋಜಿಸಿದೆ.
ನೇರ ಸಂದರ್ಶನದಲ್ಲಿ ಇನ್ಸ್‌ಟಾಕಾರ್ಟ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ಪಾಲ್ಗೊಳ್ಳಲಿದ್ದು, ಖಾಲಿ ಇರುವ ಡೆಲೆವರಿ ಬಾಯ್ ಮತ್ತು ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದೆ.
ಈ ನೇರ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ ಮತ್ತು ಯಾವುದೇ ಪದವಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಭಾಗವಹಿಸಬಹುದು (ಕಡ್ಡಾಯವಾಗಿ ಬೈಕ್ ಮತ್ತು ಸ್ಮಾರ್ಟ್ ಮೊಬೈಲ್ ಹೊಂದಿರಬೇಕು). ಆಸಕ್ತ ಅಭ್ಯರ್ಥಿಗಳು ತಮ್ಮ ಮೂಲ ಆಧಾರ್ ಕಾರ್ಡ್ ಪ್ರತಿ, ಸ್ವ-ವಿವರ ಪ್ರತಿ ಗಳೊಂದಿಗೆ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಂಪರ್ಕಿಸಿ. ಮೊಬೈಲ್ ಸಂಖ್ಯೆ 8277000619, 8197191981 ಕರೆ ಮಾಡಿ.
ಧಾರವಾಡದಲ್ಲಿ ಕೆಲಸ ಖಾಲಿ ಇದೆ: ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಧಾರವಾಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹುಬ್ಬಳ್ಳಿ ಅಂಚಟಗೇರಿಯ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಕಾಲೇಜಿನಲ್ಲಿ ಸಿ.ಬಿ.ಎಸ್.ಇ ವಿಜ್ಞಾನ ವಿಭಾಗಕ್ಕೆ ಬೋಧಿಸಲು ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ವಿದ್ಯಾರ್ಹತೆವುಳ್ಳ ಶಿಕ್ಷಕರು ನವೆಂಬರ್ 10ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836-2971590 ಮತ್ತು 8095923300ಗೆ ಸಂಪರ್ಕಿಸಬಹುದು.
ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ: ಶಿವಮೊಗ್ಗ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯು ಗ್ರಾಮೀಣ ಪುನರ್ವಸತಿ ಯೋಜನೆಯಡಿ ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಯು.ಆರ್.ಡಬ್ಲ್ಯೂ ಹಾಗೂ ಹೊಸಹಳ್ಳಿಯಲ್ಲಿ ವಿ.ಆರ್.ಡಬ್ಲ್ಯೂ, ಭದ್ರಾವತಿ ತಾಲೂಕಿನ ಗುಡುಮಘಟ್ಟ, ಹನುಮಂತಾಪುರ, ತಡಸ, ಸನ್ಯಾಸಿಕೊಡಮಗ್ಗಿ, ಸಿಮಗನಮನೆ, ಕಲ್ಲಹಳ್ಳಿ, ನಾಗತಿಬೆಳಗಲು, ತೀರ್ಥಹಳ್ಳಿ ತಾಲ್ಲೂಕಿನ ನೊಣಬೂರು, ಹೆದ್ದೂರು, ಹಣಗೆರೆ, ಮೇಲಿನ ಕುರುವಳ್ಳಿ, ಬಾಂಡ್ಯ, ಕುಕ್ಕೆ, ತ್ರಯಂಬಕಪುರ ಮತ್ತು ಕನ್ನಂಗಿ, ಶಿಕಾರಿಪುರ ತಾಲೂಕಿನ ಹೋತನಕಟ್ಟೆ, ಮುಡುಬ ಸಿದ್ದಾಪುರ, ಸಾಗರ ತಾಲೂಕಿನ ಅರಳಗೋಡು, ಯಡೆಹಳ್ಳಿ, ಆಚಾಪುರ ಹಾಗೂ ಹೊಸನಗರ ತಾಲೂಕಿನ ಮೇಲಿನ ಬೇಸಿಗೆ, ಅರಮನೆಕೊಪ್ಪ ಗ್ರಾಮ ಪಂಚಾಯ್ತಿಗಳಲ್ಲಿ ವಿ.ಆರ್.ಡಬ್ಲ್ಯೂ ಹುದ್ದೆಯನ್ನು ಭರ್ತಿ ಮಾಡುತ್ತಿದೆ.
ಆಯಾ ಗ್ರಾಮ ಪಂಚಾಯಿತಿ/ ಹತ್ತಿರದ ಗ್ರಾಮ ಪಂಚಾಯ್ತಿಗಳಲ್ಲಿ ವಾಸವಿರುವ 18 ರಿಂದ 45 ವಯೋಮಿತಿಯೊಳಗಿನ 10 ತರಗತಿ ಪಾಸಾಗಿರುವ ಅರ್ಹ ವಿಕಲಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ನಿಗದಿತ ಅರ್ಜಿ ನಮೂನೆಯನ್ನು ಆಯಾ ತಾಲ್ಲೂಕು ಪಂಚಾಯ್ತಿ ಕಚೇರಿಯಲ್ಲಿ ಎಂ.ಆರ್.ಡಬ್ಲ್ಯೂ ಗಳಿಂದ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲಾತಿಗಳನ್ನು ಲಗತ್ತಿಸಿ ಡಿಸೆಂಬರ್ 5ರೊಳಗೆ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9980150110, 7899137243, 9480767638, 9741161346, 9731922693, 9535247757 ಇವರುಗಳನ್ನು ಸಂಪರ್ಕಿಸುವುದು.
ಅಂಗನವಾಡಿ ನೇಮಕಾತಿ: ಶಿಶು ಅಭಿವೃದ್ಧಿ ಯೋಜನೆ ಮಡಿಕೇರಿ ತಾಲ್ಲೂಕಿನ ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರನ್ನು ಗುರುತಿಸಲು ಸರ್ಕಾರದ ನಿರ್ದೇಶನದಂತೆ ಕಾರ್ಯಕರ್ತೆ ಹುದ್ದೆಗೆ ದ್ವಿತೀಯ ಪಿಯುಸಿ ಯಲ್ಲಿ ತೆರ್ಗಡೆಯಾದ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಅರ್ಜಿಯೊಂದಿಗೆ (ಆನ್‍ಲೈನ್‍ನಲ್ಲಿ) ಜನನ ಪ್ರಮಾಣ ಪತ್ರ/ ಜನ್ಮ ದಿನಾಂಕವಿರುವ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ, ತಹಶೀಲ್ದಾರರು/ ಉಪ ತಹಶೀಲ್ದಾರರಿಂದ ಪಡೆದ ಮೂರು ವರ್ಷದೊಳಗಿನ ವಾಸಸ್ಥಳ ದೃಡೀಕರಣ ಪತ್ರ ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ, ಪತಿಯ ಮರಣ ಪ್ರಮಾಣಪತ್ರ ಹಾಗೂ ವಿಧವಾ ಪ್ರಮಾಣ ಪತ್ರ (ವಿಧವಾ ವೇತನದ ದೃಢೀಕರಣವನ್ನು ಪರಿಗಣಿಸುವುದಿಲ್ಲ), ಅಂಗವಿಕಲತೆ ಪ್ರಮಾಣ ಪತ್ರ (ಅಂಗವಿಕಲ ವೇತನದ ದೃಢೀಕರಣವನ್ನು ಪರಿಗಣಿಸುವುದಿಲ್ಲ), ವಿಚ್ಛೇದಿತರಾಗಿದ್ದಲ್ಲಿ ವಿಚ್ಛೇಧನ ಪ್ರಮಾಣ ಪತ್ರ. (ನ್ಯಾಯಾಲಯದಿಂದ ವಿಚ್ಛೇಧನ ಪತ್ರ), ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನಡೆಸಲ್ಪಟ್ಟ ಮಾಜಿ ದೇವದಾಸಿಯರ ಸಮೀಕ್ಷೆಯ ಪಟ್ಟಿಯಲ್ಲಿರುವ ಮಾಜಿ ದೇವದಾಸಿಯರ ಮಕ್ಕಳು ಎಂಬುದರ ಬಗ್ಗೆ ಮಹಿಳಾ ಅಭಿವೃದ್ಧಿಗಳಿಂದ ಪಡೆದ ಪ್ರಮಾಣ ಪತ್ರ ಸಲ್ಲಿಸಬೇಕು.
ಇಲಾಖಾ ಸುಧಾರಣಾ ಸಂಸ್ಥೆ/ ರಾಜ್ಯ ಮಹಿಳಾ ನಿಲಯಗಳ ನಿವಾಸಿಗಳು ಕನಿಷ್ಠ 3 ವರ್ಷ ಸಂಸ್ಥೆಯಲ್ಲಿರಬೇಕು ಹಾಗೂ ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಂದ ಪಡೆದ ನಿವಾಸಿ ಪ್ರಮಾಣ ಪತ್ರ, ಯೋಜನಾ ನಿರಾಶ್ರಿತರ ಬಗ್ಗೆ ತಹಶೀಲ್ದಾರ್ ಅವರಿಂದ ಪಡೆದ ಪ್ರಮಾಣ ಪತ್ರ, ಆಧಾರ್ ಕಾರ್ಡ್/ ಮತದಾರರ ಗುರುತಿನ ಚೀಟಿ/ ರೇಷನ್ ಕಾರ್ಡ್, ಎಲ್ಲಾ ದಾಖಲಾತಿಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಣ ಮಾಡಿಸಿ ಸಲ್ಲಿಸುವುದು.
ಅಭ್ಯರ್ಥಿಗಳು ಸಲ್ಲಿಸಲಾದ ಅಗತ್ಯ ದಾಖಲಾತಿಗಳಾದ ಅಂಕಪಟ್ಟಿ, ವಾಸಸ್ಥಳ ದೃಢೀಕರಣ ಪತ್ರ, ಜಾತಿ ದೃಢೀಕರಣ ಪತ್ರಗಳು ಹಾಗೂ ಇತರೆ ದಾಖಲಾತಿಗಳು ಕ್ರಮಬದ್ದವಾಗಿದ್ದಲ್ಲಿ ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಹಾಗೂ ಬೋನಸ್ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆಯನ್ನು ನಿಯಮಾನುಸಾರ ನಿರ್ಧರಿಸಲಾಗುವುದು ಮತ್ತು ಯಾವುದೇ ಸಂದರ್ಶನ ಪ್ರಕ್ರಿಯೆ ಇರುವುದಿಲ್ಲ.
ಇಲಾಖೆ ಕಾಲಕಾಲಕ್ಕೆ ಹೊರಡಿಸುವ ಆದೇಶಗಳಿಗೆ ಅನುಗುಣವಾಗಿ ಬದಲಾವಣೆ/ ಮಾರ್ಪಡಿಗೆ ಒಳಪಟ್ಟಿರುತ್ತದೆ. ನೇಮಕಾತಿಗೆ ಸಂಬಂಧಿಸಿದಂತೆ ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮ ತೀರ್ಮಾನವಾಗಿದೆ. ಆಯ್ಕೆಯಾದ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ ರೂ.12 ಸಾವಿರ ಗೌರವಧನ ಪಾವತಿಸಲಾಗುವುದು. ಹಾಗೂ ಸಹಾಯಕಿಯರಿಗೆ ರೂ.6 ಸಾವಿರ ಗೌರವಧನ ನಿಗದಿಗೊಳಿಸಲಾಗಿದೆ.

